ಬೆಳಗಾವಿ: ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ ಆರು ಜನರನ್ನು ಪೊಲೀಸರು ಬಂಧಿಸಿದ್ದು, ಇದರೊಂದಿಗೆ ಈ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದವರ ಸಂಖ್ಯೆ 29ಕ್ಕೆ ಏರಿದೆ.
ಗೋಕಾಕ ತಾಲೂಕಿನ ಬಗರನಾಳದ ಈರಣ್ಣ ಮಲ್ಲಪ್ಪ ಬಂಕಾಪುರ(೨೬), ಶಿವಾನಂದ ರಾಮಪ್ಪ ಕಾಮೋಜಿ(೨೨), ರಾಮದುರ್ಗ ತಾಲೂಕಿನ ಬಟಕುರ್ಕಿಯ ಆದಿಲ್‌ಶಾ ಸಿಕಂದರ ತಾಸೇವಾಲೆ(೨೩), ಮೂಡಲಗಿ ತಾಲೂಕಿನ ಖಾನಟ್ಟಿಯ ಮಹಾಂತೇಶ ಹಣಮಂತ ಹೊಸುಪ್ಪಾರ(೨೨), ನಾಗನೂರಿನ ಮಹಾಲಿಂಗಪ್ಪ ಭೀಮಪ್ಪ ಕುರಿ(೩೦) ಹಾಗೂ ಸವದತ್ತಿ ತಾಲೂಕಿನ ಸುಂದರ ಶಿವಾನಂದ ಬಾಳಿಕಾಯಿ(೨೩) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ಇವರೆಲ್ಲರೂ ಪ್ರಸಕ್ತ ವರ್ಷ ಆ. 7ರಂದು ನಡೆದ ಕೆಪಿಟಿಸಿಎಲ್ ಜ್ಯೂನಿಯರ್ ಅಸಿಸ್ಟೆಂಟ್ ಪರೀಕ್ಷೆಗೆ ಎಲೆಕ್ಟ್ರಾನಿಕ್ಸ್ ಡಿವೈಸ್‌ಗಳನ್ನು ತೆಗೆದುಕೊಂಡು ಹೋಗಿ ಪರೀಕ್ಷೆ ಬರೆದಿದ್ದರು. ಎಲ್ಲ ಆರೋಪಿಗಳಿಂದ ಎಲೆಕ್ಟ್ರಾನಿಕ್ಸ್ ಡಿವೈಸ್, ಮೊಬೈಲ್‌ಗಳು ಹಾಗೂ ಮಹತ್ವದ ದಾಖಲೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.