ಕೆಲವೇ ಗಂಟೆಗಳಲ್ಲಿ ಬಿಜೆಪಿ ಫಸ್ಟ್‌ ಲಿಸ್ಟ್‌

BJP
Advertisement

ಕೆಲವೇ ಗಂಟೆಗಳಲ್ಲಿ ಬಿಜೆಪಿ ಪಟ್ಟಿ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನವದೆಹಲಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎರಡು ಹಂತಗಳಲ್ಲಿ ಬಿಜೆಪಿ ಪಟ್ಟಿ ಬಿಡುಗಡೆಯಾಗಲಿದೆ. ಈ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರೊಂದಿಗೆ ಚರ್ಚಿಸಿ ಬಿಡುಗಡೆ ಮಾಡಲಾಗುವುದು ಎಂದರು.
ಹಲವಾರು ಜನ ನಿವೃತ್ತಿ ಘೋಷಿಸಿದ್ದಾರೆ. ಈ ಬಾರಿ ಹೊಸಮುಖಗಳಿಗೆ ಮಣೆ ಹಾಕಲಾಗಿದೆ. ಬಿಜೆಪಿ ಹೊಸತನಕ್ಕೆ ಹೆಚ್ಚು ಒತ್ತು ನೀಡಿದೆ ಎಂದು ತಿಳಿಸಿದ್ದಾರೆ.