ವಿಜಯಪುರ: ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕುರಿತು ಕೇಂದ್ರ ಹೈಕಮಾಂಡ್ ಮಂಡಳಿ ಹಾಗೂ ಪಕ್ಷದ ನಾಯಕರು ಭರವಸೆ ನೀಡಿದ್ದು, ಕರ್ನಾಟಕದ ಮೀಸಲಾತಿ ಗೊಂದಲ ನಿವಾರಣೆ ಮಾಡುವುದಾಗಿ ತಿಳಿಸಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮಾಜಕ್ಕೆ ಶೀಘ್ರದಲ್ಲಿ ಒಳ್ಳೇಯ ಸುದ್ದಿ ನೀಡಲಿದ್ದಾರೆ. ಅಲ್ಲದೆ, ನಮ್ಮ ಶ್ರೀಗಳ ಹೋರಾಟಕ್ಕೆ ಜಯ ಸಿಗಲಿದೆ. ಅಲ್ಲದೆ, ಚಿಲ್ಲರೆ ಹೇಳಿಕೆ ನೀಡಬಾರದು ಎಂದು ಸೂಚನೆ ನೀಡಿದ್ದಾರೆ. ಹೀಗಾಗಿ ಚಿಲ್ಲರೆ ವ್ಯಕ್ತಿಗಳ ಬಗ್ಗೆ ಮಾತನಾಡುವುದಿಲ್ಲ. ಇಂದು ಸಂಕ್ರಾತಿ ಇದೆ ಎಂದರು.
ಕಾರು ಚಾಲಕನ ಸಾವಿನ ಬಗ್ಗೆ ಸಚಿವ ಮುರುಗೇಶ ನಿರಾಣಿ ತಮ್ಮ ವಿರುದ್ಧ ಮಾಡಿರುವ ಆರೋಪದ ಬಗ್ಗೆ ಸಿಐಬಿ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿರುವುದಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.