ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಡಿಸಿಎಂ ಲಕ್ಷಣ ಸವದಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಸಮ್ಮುಖದಲ್ಲಿ ಅವರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪಕ್ಷದ ಶಾಲು ಹೊದಿಸಿ ಬಾವುಟ ನೀಡಿ ಬರಮಾಡಿಕೊಂಡರು. ಅಪಾರ ಸಂಖ್ಯೆಯಲ್ಲಿ ಸವದಿ ಅಭಿಮಾನಿಗಳು ಕಾಂಗ್ರೆಸ್ ಕಚೇರಿಯಲ್ಲಿ ಉಪಸ್ಥಿತರಿದ್ದು, ಸವದಿ ಅವರೊಂದಿಗೆ ಕೆಲ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಯಾದರು.