ಬೆಳಗಾವಿ: ಖಾತೆ ಬದಲಾವಣೆಗಾಗಿ ೨ ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಕಿತ್ತೂರು ತಹಶೀಲ್ದಾರ್ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಖಚಿತ ಮಾಹಿತಿ ಮೇಲೆ ನಿನ್ನೆ ರಾತ್ರಿ ಲೋಕಾಯುಕ್ತ ಎಸ್ಪಿ ಯಶೋಧಾ ವಂಟಗೋಡಿ ಅವರ ನೇತೃತ್ವದ ಅಧಿಕಾರಿಗಳು ನಿನ್ನೆ ರಾತ್ರಿ ಏಕಾಏಕಿ ಕಿತ್ತೂರು ಪಟ್ಟಣದಲ್ಲಿರುವ ತಹಶೀಲ್ದಾರ್ ಸೋಮಲಿಂಗ ನಿವಾಸದ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ತಮ್ಮ ನಿವಾಸದಲ್ಲಿಯೇ ೨ ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ಅವರು ಪ್ರತ್ಯಕ್ಷವಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಂತರ ಅಧಿಕಾರಿಗಳು ಮನೆಯಲ್ಲಿ ರಾತ್ರಿಯಿಡೀ ಪರಿಶೀಲನೆ ನಡೆಸಿ ೧೦ ಲಕ್ಷಕ್ಕೂ ಹೆಚ್ಚು ನಗದು ಸೇರಿದಂತೆ ದಾಖಲೆ ಪತ್ರಗಳನ್ನು ಜಪ್ತಿ ಮಾಡಿದ್ದಾರೆ.
ತಹಶೀಲ್ದಾರ್, ಮನೆಯಲ್ಲೇ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಗುಮಾಸ್ತ ಜಿ. ಪ್ರಸನ್ನ ಮತ್ತು ತಹಶೀಲ್ದಾರ್ ಸೋಮಲಿಂಗ ಹಾಲಗಿಯನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ. ೨೮ರ ತನಕ ನ್ಯಾಯಾಂಗ ಬಂಧನದಲ್ಲಿರಿಸಲು ಆದೇಶಿಸಿದ ಹಿನ್ನೆಲೆಯಲ್ಲಿ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗ್ರಹಕ್ಕೆ ಕಳುಹಿಸಲಾಗಿದೆ.