ಗಂಟು ಬೇನೆಯಿಂದ ಮೃತಪಟ್ಟ ಎತ್ತುಗಳಿಗೆ ತಲಾ 30 ಸಾವಿರ ರೂ. ಹಾಗೂ ಹಸುವಿಗೆ ತಲಾ 20 ಸಾವಿರ ರೂ. ಪರಿಹಾರ ನೀಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು.
ಕೆಎಂಎಫ್ ಹಾಗೂ ಹಾವೇರಿ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಆಯೋಜಿಸಿರುವ ಅರಬಗೊಂಡ ಗ್ರಾಮದಲ್ಲಿ ಹಾವೇರಿ ಜಿಲ್ಲಾ ಸಹಕಾರ ಹಾಲು ಒಕ್ಕೂಟದ “ಮೆಗಾ ಡೈರಿ” ನಿರ್ಮಾಣಕ್ಕೆ ಭೂಮಿ ಪೂಜಾ ಕಾರ್ಯವನ್ನು ನೆರವೇರಿಸಿ ಅವರು ಮಾತನಾಡಿ, ಹಾಲು ಉತ್ಪಾದನೆ ಹೆಚ್ಚಾಗಲು ಹಣ ಹೂಡಿಕೆ ಹೆಚ್ಚಾಗಬೇಕು. ಈ ನಿಟ್ಟಿನಲ್ಲಿ ದೇಶದಲ್ಲಿಯೇ ಪ್ರಥಮ ಬಾರಿಗೆ ಕರ್ನಾಟಕದಲ್ಲಿ ಹಾಲು ಉತ್ಪಾದಕರಿಂದ ಹಾಲು ಉತ್ಪಾದಕರಿಗೋಸ್ಕರ ಕ್ಷೀರ ಸಮೃದ್ಧಿ ಬ್ಯಾಂಕ್ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು ಎಂದರು.