ಗಡಿವಿವಾದಕ್ಕೆ ಸಂಚಾರ ಸ್ಥಗಿತ: ಸಾರಿಗೆ ಇಲಾಖೆಗೆ ಭಾರೀ ಹೊಡೆತ

ಸಾರಿಗೆ
Advertisement

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದ ಕರ್ನಾಟಕ ಸಾರಿಗೆ ಇಲಾಖೆ ಮೇಲೆ ಭಾರಿ ಹೊಡೆತ ನೀಡಿದ್ದು, ದಿನನಿತ್ಯ ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸುವಂತಾಗಿದೆ.
ಸಾರಿಗೆ ಇಲಾಖೆಯ ಅಧಿಕಾರಿಗಳೇ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮಹಾರಾಷ್ಟ್ರ ರಾಜ್ಯದಲ್ಲಿ ಕೆಲವು ಕಿಡಿಗೇಡಿಗಳು ಕರ್ನಾಟಕದ ಬಸ್ಸಿನ ಮೇಲೆ ಕಪ್ಪು ಮಸಿ ಬಳಿದು, ಮತ್ತೊಂದೆಡೆ ಕಲ್ಲು ತೂರಾಟ ನಡೆಸಿದ ಬೆನ್ನಲ್ಲೇ ಕರ್ನಾಟಕದಿಂದ ಮಹಾರಾಷ್ಟ್ರದ ಸಾಂಗ್ಲಿ, ಮೀರಜ್, ಪುಣೆ, ಸಂಪರ್ಕಿಸುವ ಸಾರಿಗೆ ವ್ಯವಸ್ಥೆಯನ್ನು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.
ದಿನನಿತ್ಯ ರಾಜ್ಯದ ವಿವಿಧ ಮೂಲೆಗಳಿಂದ ಕಾಗವಾಡ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ದಿನನಿತ್ಯ ನೂರಕ್ಕೂ ಹೆಚ್ಚು ಬಸ್‌ಗಳು ಸಂಚರಿಸುತ್ತಿದ್ದವು. ಆದರೆ ಸದ್ಯ ಕಾಗವಾಡ ಗಡಿವರೆಗೆ ಬಸ್ ಸೇವೆ ನೀಡಲಾಗಿದ್ದು, ಹಲವಾರು ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.