ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ನಡುವಿನ ಗಡಿ ವಿವಾದ ಸಂಬಂಧ ರಾಜ್ಯದ ನಿಲುವು ಸ್ಪಷ್ಟವಾಗಿದ್ದು, ನಮ್ಮ ನಿಲುವು ಸಾಂವಿಧಾನಿಕ ಹಾಗೂ ಕಾನೂನು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಗುರುವಾರ ಹೇಳಿದ್ದಾರೆ. ಗಡಿ ವಿವಾದ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ರಾಜ್ಯದ ನಿಲುವು ಸ್ಪಷ್ಟವಾಗಿದೆ. ಮಹಾರಾಷ್ಟ್ರದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸುವುದಿಲ್ಲ. ನಮ್ಮ ನಿಲುವು ಸಾಂವಿಧಾನಿಕ ಮತ್ತು ಕಾನೂನು ಬದ್ಧವಾಗಿದೆ ಎಂದು ಹೇಳಿದ್ದಾರೆ.