ಗಣೇಶ ಹಬ್ಬ ಕೇವಲ ಒಂದು ಧರ್ಮಕ್ಕೆ ಸೀಮಿತವಾದ ಹಬ್ಬವಲ್ಲ. ಗಣೇಶೋತ್ಸವದ ಮೂಲಕ ತಿಲಕರು ಸ್ವಾತಂತ್ರ್ಯ ಕಿಚ್ಚು ಹಚ್ಚಿದ್ದರು. ರಾಷ್ಟ್ರೀಯ ಜೋಡಣೆಗೆ ಬಹುಮುಖ್ಯ ಪಾತ್ರ ವಹಿಸಿದ ಗಣೇಶ ಉತ್ಸವವನ್ನು ಮಾಡುವುದು ಬೇಡ ಎನ್ನಲು ಕಾಂಗ್ರೆಸ್ ನಾಯಕರು ಯಾರು? ಎಂದು ಬಜೆಪಿ ಪ್ರಶ್ನಿಸಿದೆ.
ಈದ್ಗಾ ಮೈದಾನದಲ್ಲಿ ಇಷ್ಟು ದಿನ ಧ್ವಜಾರೋಹಣ ನಡೆಸಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ ಜಮೀರ್ ಅಹ್ಮದ್ ಖಾನ್ ಈಗ ಗಣೇಶೋತ್ಸವಕ್ಕೆ ವಿರೋಧಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರ ಕೃಪಾಶೀರ್ವಾದದಿಂದ ಚಾಮರಾಜಪೇಟೆಯ ಈದ್ಗಾ ಮೈದಾನ ಅಂದಿನ ಲಾಲ್ ಚೌಕ್ ಆಗಿ ಪರಿವರ್ತನೆಯಾಗುತ್ತಿದೆಯೇ? ಎಂದು ಬಿಜೆಪಿ ಟ್ವೀಟ್ ಮಾಡಿದೆ.