ಗುಲ್ಬರ್ಗಾ, ವಿಜಯಪುರದಲ್ಲಿ ಜವಳಿ ಪಾರ್ಕ್ ಕಾಮಗಾರಿ ಶೀಘ್ರ ಪ್ರಾರಂಭ: ಸಿಎಂ

ಜವಳಿ ಪಾರ್ಕ್
Advertisement

ವಿಜಯಪುರ: ರಾಜ್ಯದ ಎರಡು ಜವಳಿ ಪಾರ್ಕ್‌ಗಳನ್ನು ಗುಲ್ಬರ್ಗಾ ಮತ್ತು ವಿಜಯಪುರದಲ್ಲಿ ಸ್ಥಾಪಿಸಲು ಅನುದಾನ ನೀಡಿ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. ಒಂದು ಸಾವಿರ ಎಕರೆಯಲ್ಲಿ ನಿರ್ಮಾಣವಾಗಲಿರುವ ಈ ಜವಳಿ ಪಾರ್ಕ್‌ನಿಂದ ಸುಮಾರು 25 ಸಾವಿರ ಯುವಕರಿಗ ಉದ್ಯೋಗ ದೊರೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ತಿಳಿಸಿದರು.
ಶ್ರೀ ಸಿದ್ಧೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್, ವಿಜಯಪುರ ಇವರ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ಜೆ.ಎಸ್.ಎಸ್ ಆಸ್ಪತ್ರೆ ಆವರಣದಲ್ಲಿ ಆಯೋಜಿಸಿರುವ ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆಗೊಳಿಸಿ ಮಾತನಾಡಿದರು.