ಪುಣೆ: ಪುಣೆಯ ಗೂಗಲ್ ಕಚೇರಿಯಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಕರೆ ಮಾಡಿದ ವ್ಯಕ್ತಿ ಹೈದರಾಬಾದ್ ಮೂಲದ ಪನಯಂ ಶಿವಾನಂದ್ ಎಂದು ಗುರುತಿಸಲಾಗಿದ್ದು, ಮುಂಬೈ ಬಿಕೆಸಿ ಕಚೇರಿಗೆ ಈ ಕರೆ ಬಂದಿತ್ತು. ಮುಂಬೈ ಪೊಲೀಸರ ಪ್ರಕಾರ, ಕರೆ ಮಾಡಿದ ವ್ಯಕ್ತಿ ಪುಣೆಯ ಗೂಗಲ್ ಕಚೇರಿಯಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ ಹಾಕಿದ್ದಾನೆ. ಬೆದರಿಕೆ ಕರೆ ಮಾಡಿದ್ದಕ್ಕಾಗಿ ಮುಂಬೈ ಪೊಲೀಸರು ಪನಯಂ ಶಿವಾನಂದ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.