ಗೋ ಬ್ಯಾಕ್ ಮೋದಿ ಘೋಷಣೆ ಕೂಗಿ ಕೈ ಕಾರ್ಯಕರ್ತರ ಪ್ರತಿಭಟನೆ

go Back
Advertisement

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನುಡಿದಂತೆ ನಡೆಯದೆ, ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಹುಧಾ ಮಹಾನಗರ ಪಾಲಿಕೆ ಆವರಣದಿಂದ ಮಿನಿವಿಧಾನ ಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಗೋ ಬ್ಯಾಕ್ ಮೋದಿ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.
ಶೇ.40 ಪರ್ಸೆಂಟ್ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ನಿರುದ್ಯೋಗ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ, ಯುವಕರಿಗೆ ಉದ್ಯೋಗ ಇಲ್ಲದಂತೆ ಮಾಡಿದೆ. ಹು-ಧಾ ಅವಳಿನಗರದಲ್ಲಿ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗದೆ ಜನರು ಸಂಕಷ್ಟ ಎದುರಿಸುವಂತಾಗಿದೆ. ನಗರದಲ್ಲಿ ಸಾಕಷ್ಟು ಸಮಸ್ಯೆ ಇದ್ದಾಗಲೂ ಕೋಟಿ‌ ಕೋಟಿ ವೆಚ್ಚ ಮಾಡಿ ಯುವಜನೋತ್ಸವ ಮಾಡಲಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ದೋರೆರಾಜ್ ಮನಿಕುಂಟ್ಲ, ಗಣೇಶ ಮುಧೋಳ, ಇಮ್ರಾಮ್ ಎಲಿಗಾರ, ಇಲಿಯಾಸ್ ಮಣಿಯಾರ, ಕವಿತಾ ಕಬ್ಬೇರ, ಮಂಜುಳಾ ಜಾಧವ, ಮೋಹನ ಹಿರೇಮನಿ, ಶಂಭು ಸಾಲಮನಿ ಇದ್ದರು.