ಹುಬ್ಬಳ್ಳಿ : ನನಗೆ ಟಿಕೆಟ್ ಯಾವ ಕಾರಣಕ್ಕೆ ನಿರಾಕರಣೆ ಮಾಡುತ್ತಿದ್ದಾರೊ ಗೊತ್ತಿಲ್ಲ. ಆ ಕುರಿತು ಚರ್ಚೆಗೆ ರಾಷ್ಟ್ರೀಯ ಅಧ್ಯಕ್ಷರು ದೆಹಲಿಗೆ ಬರಲು ಹೇಳಿದ್ದಾರೆ. ಹೊರಟಿದ್ದೇನೆ. ನೋಡೋಣ ಎಂದರು.
ಗೌರವದಿಂದ ಹೊರ ಹೋಗಬೇಕು ಎಂದು ಬಯಸುವ ವ್ಯಕ್ತಿ ನಾನು. ಹೀಗಾಗಿ ವರಿಷ್ಠರಿಗೆ ಕಾರಣ ಕೇಳಿದ್ದೇನೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.
ಬೆಳಿಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲ ಪಟ್ಟಿಯಲ್ಲಿ ಟಿಕೆಟ್ ಘೋಷಣೆ ಆಗಿಲ್ಲ. ಘೋಷಣೆ ಪೂರ್ವದಲ್ಲಿ ರಾಷ್ಟ್ರೀಯ ಅಧ್ಯಕ್ಷರು ದೆಹಲಿಗೆ ಬರಲು ಕರೆ ಮಾಡಿದ್ದರು ಎಂದರು.
ನನ್ನ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಅಲ್ಲದೇ ಕಳೆದ ಎರಡು ವರ್ಷದಿಂದ ಯಾವುದೇ ಸ್ಥಾನಮಾನ ಇಲ್ಲ. ಶಾಸಕನಾಗಿ ಕೆಲಸ ಮಾಡಿಕೊಂಡಿದ್ದೆ. ಸಕಾರಣವಿಲ್ಲದೇ ಟಿಕೆಟ್ ನಿರಾಕರಣೆ ಮಾಡಿದ್ದಾರೆ.
ರಾಷ್ಡ್ರೀಯ ಅಧ್ಯಕ್ಷರೊಂದಿಗೆ ಮಾತನಾಡಿದ ಬಳಿಕ ಮುಂದೇನಾಗುತ್ತೊ ನೋಡೋಣ ಎಂದು ಹೇಳಿದರು.