ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳದ ಜೈನಮಠದ ಪೀಠಾಧಿಪತಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (73) ಇಂದು ವಿಧಿವಶರಾದರು.
ಅನಾರೋಗ್ಯದ ಹಿನ್ನೆಲೆಯಲ್ಲಿ ಸ್ವಾಮೀಜಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಿಸದೇ ಬೆಳಗ್ಗೆ ನಿಧನರಾಗಿದ್ದಾರೆ.
ಮೇ 3, 1949ರಲ್ಲಿ ಜನಿಸಿರುವ ಇವರು ನಾಲ್ಕು ಮಹಾಮಸ್ತಕಾಭಿಷೇಕದ ರೂವಾರಿಯಾಗಿದ್ದರು.