ಮಂಗಳೂರು: ಚಿತ್ರದುರ್ಗ ಮುರುಘಾ ಮಠದ ಶ್ರೀಗಳ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ. ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಯುತ್ತಿದೆ. ತನಿಖೆ ನಡೆಸಲು ಪೋಲೀಸರಿಗೆ ಮುಕ್ತ ಅವಕಾಶವನ್ನು ನೀಡಲಾಗಿದೆ ಎಂದರು.