ಚೂರಿ ಇರಿದು ಯುವಕನ ಬರ್ಬರ ಹತ್ಯೆ

ಕೊಲೆ
Advertisement

ಮಂಗಳೂರು(ಕಾಪು): ರಾ.ಹೆ. 66ರ ಸಮೀಪದ ಪಾಂಗಾಳ ಪೇಟೆಯ ಹಳೆಯ ಬಾರ್ ಪಕ್ಕದಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಚೂರಿ ಇರಿದು ಹತ್ಯೆ ಮಾಡಿದ ಘಟನೆ ಭಾನುವಾರ ಸಂಜೆ 4ಗಂಟೆಯ ಸುಮಾರಿಗೆ ಸಂಭವಿಸಿದೆ.
ಕೊಲೆಯಾದ ವ್ಯಕ್ತಿ ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ(39) ಎಂದು ಗುರುತಿಸಲಾಗಿದೆ. ಆರೋಪಿ ಪರಾರಿಯಾಗಿದ್ದಾನೆ.
ಯಾರೋ ದುಷ್ಕರ್ಮಿಗಳು ಶರತ್ ಶೆಟ್ಟಿ ಎಂಬುವರ ಎದೆಯ ಭಾಗಕ್ಕೆ ಚಾಕು ಹಾಕಿದ್ದಾರೆ ಎನ್ನಲಾಗಿದೆ. ಅಲ್ಲಿಯ ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಾಲಿಸಿದ್ದಾರೆ. ಆದರೆ ಶರತ್ ಶೆಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಘಟನೆ ಸ್ಥಳಕ್ಕೆ ಕಾರ್ಕಳ ಡಿವೈಎಸ್ಪಿ ಅರವಿಂದ್ ಕಲಗುಜ್ಜಿ, ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ, ಕಾಪು ಎಸ್ಸೈ ಸುಮ ಬಿ., ಕ್ರೈಂ ಎಎಸ್‌ಐ ಭರತೇಶ್ ಕಂಕಣವಾಡಿ ಸಹಿತ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರು ಈ ಪ್ರಕರಣವನ್ನು ತನಿಖೆ ನಡೆಸುತ್ತಿದ್ದಾರೆ.