ಹಗರಿಬೊಮ್ಮನಹಳ್ಳಿ: ಮುಂಬರುವ ವಿಧಾನಸಭಾ ಚುನಾವಣೆಗೆ ಉತ್ತಮ ಅಭ್ಯರ್ಥಿಗಳ ಆಯ್ಕೆ ನಡೆಯುತ್ತಿದ್ದು, ಜನವರಿ ಕೊನೆ ವೇಳೆಗೆ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಹಗರಿಬೊಮ್ಮನಹಳ್ಳಿ ಮಾಲವಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಆಗಮಿಸಿದ ಸಂದರ್ಭದಲ್ಲಿ ಹೆಲಿಪ್ಯಾಡ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಕ್ರಾಂತಿಗೆ ಮೊದಲ ಪಟ್ಟಿ ಬಿಡುಗಡೆ ಮಾಡಬೇಕಿತ್ತು. ಆದರೆ ಗೆಲ್ಲುವ ಅಭ್ಯರ್ಥಿಗಳ ಆಯ್ಕೆ ಮಾಡಲು ನಿಟ್ಟಿನಲ್ಲಿ ವಿಳಂಬವಾಗುತ್ತಿದ್ದು, ಜನವರಿ ಕೊನೆಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದರು.