ಕೊಪ್ಪಳ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ವತಿಯಿಂದ ಸಾರ್ವಜನಿಕರ ಬಳಕೆಗೆ ನೀಡಲಾಗಿದ್ದ ಆಂಬುಲೆನ್ಸ್‌ನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ, ಬಳ್ಳಾರಿ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಅರುಣಾಲಕ್ಷ್ಮೀ ಹಾಗೂ ಕನಕಗಿರಿ ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಡಾ. ವೆಂಕಟರಮಣ ಭಾವಚಿತ್ರಗಳು ವಾಹನದ ಮೇಲಿದೆ. ಹೀಗಾಗಿ ಚುನಾವಣಾ ಮಾದರಿ ನೀತಿಸಂಹಿತೆ ಉಲ್ಲಂಘನೆ ಆಗುವುದೆಂಬ ಕಾರಣಕ್ಕಾಗಿ ವಶಕ್ಕೆ ಪಡೆದಿದ್ದಾರೆ. ಸದ್ಯ ವಾಹನ ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಕ್ಷೇತ್ರದ ಚುನಾವಣಾಧಿಕಾರಿ ಸಮೀರ ಮುಲ್ಲಾ ತಿಳಿಸಿದರು.