ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮೀ ಅರುಣಾ ನಾಮಪತ್ರ ಸಲ್ಲಿಕೆ

ಲಕ್ಷ್ಮಿ ಅರುಣಾ
Advertisement

ಬಳ್ಳಾರಿ: ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿಯಾಗಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮೀ ಅರುಣಾ ಇಂದು ಮಹಾನಗರ ಪಾಲಿಕೆ ಕಚೇರಿಯಲ್ಲಿ ಚುನಾವಣಾಧಿಕಾರಿ ಎಸ್.ಎನ್. ರುದ್ರೇಶ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಇದಕ್ಕೂ ಮುನ್ನ ನಗರದ ಕನಕದುರ್ಗಮ್ಮ ದೇವಿಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಅವರು ಸಾವಿರಾರು ಕಾರ್ಯಕರ್ತರೊಂದಿಗೆ ಮೆರವಣಿಗೆ ಮೂಲಕ ಪಾಲಿಕೆ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.