ಬೆಂಗಳೂರು: ಬಿಜೆಪಿ ಸರ್ಕಾರ ಮೂರು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಾಯಕರು ಅದ್ಧೂರಿ ಜನ ಸ್ಪಂದನೆ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಬಿಜೆಪಿ ಮುಖಂಡರು ಕೋಟ್ಯಂತರ ರೂಪಾಯಿ ವ್ಯಹಿಸಿ ದೊಡ್ಡಬಳ್ಳಾಪುರದಲ್ಲಿ ನಡೆಸುತ್ತಿರುವ ಬೃಹತ್ ಸಮಾವೇಶಕ್ಕೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಗೈರಾಗಿದ್ದಾರೆ.ಕಾಲು ನೋವಿನಿಂದ ಬಳಲುತ್ತಿರುವ ಕೆ.ಎಸ್ ಈಶ್ವರಪ್ಪ ಚಿಕಿತ್ಸೆಯ ಕಾರಣ ಶಿವಮೊಗ್ಗದಿಂದ ದೊಡ್ಡಬಳ್ಳಾಪುರದವರೆಗೆ ಪ್ರಯಾಣ ಮಾಡಲಾಗದೇ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ ಎನ್ನಲಾಗಿದೆ.