ವಿಜಯಪುರ(ಹೂವಿನಹಿಪ್ಪರಗಿ): ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಹಾಗೂ ಜನರಿಗೆ ಸೂಕ್ತ ಆರೋಗ್ಯ ಸೇವೆ ಸಿಗುತ್ತಿಲ್ಲ. ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಇಲ್ಲದಂತಾಗಿದೆ. ಇದೆಲ್ಲದಕ್ಕೂ ಪರಿಹಾರ ಕಲ್ಪಿಸಬೇಕೆಂಬುದು ಪಂಚರತ್ನ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ದೇವರಹಿಪ್ಪರಗಿ ಮತಕ್ಷೇತ್ರದ ಹೂವಿನಹಿಪ್ಪರಗಿಯಲ್ಲಿ ನಡೆದ ಪಂಚರತ್ನ ಕಾರ್ಯಕ್ರಮದ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.
ಮಹಿಳಾ ಸ್ವ-ಸಹಾಯ ಸಂಘದ ಸಾಲಮನ್ನಾ ಒಂದರಿಂದ ಪದವಿವರೆಗೆ ಉಚಿತ ಶಿಕ್ಷಣ, ಉಚಿತ ಆರೊಗ್ಯ ಸೇವೆ, ಪ್ರತಿ ಗ್ರಾಪಂ ಮಟ್ಟದಲ್ಲಿ 30 ಹಾಸಿಗೆಯ ಹೈಟೆಕ್ ಆಸ್ಪತ್ರೆ ನಿರ್ಮಾಣ, ಪ್ರತಿಯೊಬ್ಬರಿಗೂ ವಸತಿ ಹಾಗೂ ಪ್ರತಿ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪಿಸಿ ಯುವಜನರಿಗೆ ಉದ್ಯೋಗ ನೀಡಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸುವುದು ಪಂಚರತ್ನ ಕಾರ್ಯಕ್ರಮಗಳ ಭಾಗವಾಗಿದೆ ಎಂದರು.