ಜೆಡಿಎಸ್‌ ನಾಯಕ ಪ್ರಭಾಕರ ರೆಡ್ಡಿ ಕಚೇರಿ ಮೇಲೆ ಐಟಿ ದಾಳಿ

Advertisement

ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಫೆ.15 ರಂದು ಜೆಡಿಎಸ್ ನಾಯಕ ಪ್ರಭಾಕರ ರೆಡ್ಡಿ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಮೈಲಸಂದ್ರದಲ್ಲಿರುವ ನಿವಾಸದ ಮೇಲೆ ಐಟಿ ದಾಳಿ ನಡೆದಿದ್ದು, ಹೆಚ್ ಎಸ್ ಆರ್ ಲೇಔಟ್ ನಲ್ಲಿರುವ ಕಚೇರಿ, ಕೋಣನಕುಂಟೆಯಲ್ಲಿರುವ ಫ್ಲಾಟ್ ಮೇಲೆಯೂ ದಾಳಿ ನಡೆದಿದೆ. ಪ್ರಭಾಕರ ರೆಡ್ಡಿ ರಿಲಯ್ ಎಸ್ಟೇಟ್ ಉದ್ಯಮಿಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಪ್ರಭಾಕರ ರೆಡ್ಡಿ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಆಗಿದ್ದು, ರಿಯಲ್‌ ಎಸ್ಟೇಟ್‌, ಬಿಲ್ಡಿಂಗ್‌, ಫೈನಾನ್ಸ್‌ ವ್ಯವಹಾರಗಳಲ್ಲಿ ತೊಡಗಿಕೊಂಡಿದ್ದಾರೆ. ಕರ್ನಾಟಕ ವಿಧಾನಸಭೆಗೆ ಜೆಡಿಎಸ್‌ ಬಿಡುಗಡೆ ಮಾಡಿರುವ ಮೊದಲ ಪಟ್ಟಿಯಲ್ಲಿ ಪ್ರಭಾಕರ ರೆಡ್ಡಿ ಅವರ ಹೆಸರಿದೆ. ಅವರು ನೂರಾರು ಕೋಟಿ ಆಸ್ತಿಯನ್ನು ಹೊಂದಿದ್ದಾರೆಂದು ವರದಿಯಾಗಿದೆ. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ದಾಳಿ ಮಹತ್ವ ಪಡೆದುಕೊಂಡಿದ್ದರೆ, ಚುನಾವಣೆ ಸಂದರ್ಭದಲ್ಲಿ ಇಂತಹ ದಾಳಿಗಳು ಸಾಮಾನ್ಯ ಎಂದು ಜೆಡಿಎಸ್ ನಾಯಕ, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.