ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಬಿಪಿಎಲ್ ಕಾರ್ಡ್ದಾರರಿಗೆ ಜ. 1ರಿಂದ ಕುಚಲಕ್ಕಿ ವಿತರಿಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಈ ಮೂರೂ ಜಿಲ್ಲೆಗಳಲ್ಲಿ ವಿತರಿಸಲು ಒಟ್ಟು 13 ಲಕ್ಷ ಕ್ವಿಂಟಲ್ ಕುಚಲಕ್ಕಿ ಅವಶ್ಯವಿದೆ. ಐದು ಕಿಲೋ ಕುಚಲಕ್ಕಿ ಪಡಿತರ ಮೂಲಕ ವಿತರಿಸಲಾಗುವುದು. ಅದಕ್ಕೆ ಪೂರಕವಾಗಿ ಡಿ. 1ರಿಂದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರಕನ್ನಡ ಜಿಲ್ಲೆಯಲ್ಲಿ ಬೆಂಬಲ ಬೆಲೆ ನೀಡಿ ಭತ್ತ ಖರೀದಿ ಕೇಂದ್ರ ತೆರೆಯಲಾಗುವುದು. ಕೆಂಪು ಕುಚಲಕ್ಕಿಯ ಭತ್ತವನ್ನೇ ಖರೀದಿ ಮಾಡಲಾಗುವುದು. ನಮ್ಮಲ್ಲಿರುವ ಕುಚಲಕ್ಕಿಯ ಭತ್ತ ವರ್ಷ ಪೂರ್ತಿ ಸಿಗುವುದು ಕಷ್ಟ. ಹೀಗಾಗಿ ರಾಜ್ಯದ ಬೇರೆ ಜಿಲ್ಲೆಗಳಿಂದ ಭತ್ತ ಖರೀದಿ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ’ ಎಂದರು.