ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರಿಗೆ ಅಕ್ಟೋಬರ್ 7ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮತ್ತೆ ನೋಟಿಸ್ ಜಾರಿ ಮಾಡಿದೆ.
ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ಈ ಮೊದಲು ಸೆಪ್ಟೆಂಬರ್ 23ರಂದು ಇಬ್ಬರಿಗೂ ಇಡಿ ಸಮನ್ಸ್ ಜಾರಿ ಮಾಡಿತ್ತು. ಆದರೆ, ರಾಜ್ಯದಲ್ಲಿ ಭಾರತ್ ಜೋಡೋ ಪಾದಯಾತ್ರೆ ನಡೆಯುತ್ತಿರುವುದರಿಂದ ಡಿಕೆಶಿ ಹಾಗೂ ಡಿ.ಕೆ. ಸುರೇಶ್ ಕಾಲಾವಕಾಶ ನೀಡುವಂತೆ ಕೋರಿದ್ದರು.
ಆದರೆ ಕಾಲಾವಕಾಶ ನೀಡಲು ನಿರಾಕರಿಸಿರುವ ಜಾರಿ ನಿರ್ದೇಶನಾಲಯ ಶುಕ್ರವಾರ ಅಕ್ಟೋಬರ್ 7ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.