ಡ್ರೋನ್ ಕ್ಯಾಮೆರಾ ಹಾರಾಟ ನಿಷೇಧ

Advertisement

ಮಂಡ್ಯ ಜಿಲ್ಲೆಗೆ ಸನ್ಮಾನ್ಯ ಪ್ರಧಾನಮಂತ್ರಿಗಳು ಮಾರ್ಚ್ 12 ರಂದು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದಶಪಥ ರಸ್ತೆ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸನ್ಮಾನ್ಯರ ಕಾರ್ಯಕ್ರಮ ನಡೆಯುವ ರೋಡ್ ಶೋ ಸೇರಿದಂತೆ ಎಲ್ಲಾ ಕಾರ್ಯಕ್ರಮಗಳ ಸ್ಥಳಗಳಲ್ಲಿನ 15 ಕಿ.ಮೀ. ವ್ಯಾಪ್ತಿಯಲ್ಲಿ ಮಾನವ ರಹಿತ ಡ್ರೋನ್ ಕ್ಯಾಮೆರಾ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ. ಈ ಆದೇಶವನ್ನು ದಂಡ ಪ್ರಕ್ರಿಯೆ ಸಂಹಿತೆ ಸಿ.ಆರ್.ಪಿ.ಸಿ 1973 ಕಲಂ 144 ರಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ ಹೊರಡಿಸಿದ್ದಾರೆ.