ಕುಷ್ಟಗಿ: ವಿಧಾನಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಗುವುದನ್ನು ಅರಿತ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ತರಾತುರಿಯಲ್ಲಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದ್ದಾರೆ.
ಇಂದು ಬೆಳಗ್ಗೆ ಎಂಟು ಗಂಟೆಯಿಂದಲೇ ಶಾಸಕ ಬಯ್ಯಾಪುರ ಕುಷ್ಟಗಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೈಗೊಂಡಂತಹ ಅಭಿವೃದ್ಧಿ ಕಾಮಗಾರಿಗಳಿಗೆ ಗಡಿಬಿಡಿಯಲ್ಲಿ ಭೂಮಿಪೂಜೆ ನೆರವೇರಿಸಿದ್ದಾರೆ. ಪಟ್ಟಣದ ಪ್ರಥಮ ದರ್ಜೆ ಕಾಲೇಜಿನ ಕಟ್ಟಡ ಉನ್ನತೀಕರಣದ ಕಾಮಗಾರಿಗೆ ಬೆಳಗ್ಗೆ 8.30ರ ಸುಮಾರಿಗೆ ಅಡಿಗಲ್ಲು ಸಮಾರಂಭ ನೆರವೇರಿಸಿದರು. 11ಗಂಟೆ ಸುಮಾರಿಗೆ ಶಿರಗುಂಪಿ ಗ್ರಾಮಕ್ಕೆ ತೆರಳಿದ ಬಯ್ಯಾಪುರ ಅಲ್ಲಿ ನಿರ್ಮಾಣಗೊಳ್ಳಲಿರುವ ಕಾಂಕ್ರಿಟ್ ರಸ್ತೆ ನಿರ್ಮಾಣದ ಕಾಮಗಾರಿಗೆ ಪೂಜೆ ಸಲ್ಲಿಸಿದರು.
ಕೇಂದ್ರ ಚುನಾವಣಾ ಆಯೋಗ ನೀತಿ ಸಂಹಿತೆ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರವರ ಅಧಿಕಾರ ಅವಧಿಯ ಕೊನೆಯ ಕಾರ್ಯಕ್ರಮಗಳು ಇವಾಗಿವೆ.