ತಾಲೂಕು ಕಚೇರಿ ಆವರಣದಲ್ಲಿ ಮೂತ್ರ ವಿಸರ್ಜನೆ: ಸಾರ್ವಜನಿಕರಿಂದ ಆಕ್ರೋಶ

Advertisement

ಶ್ರೀರಂಗಪಟ್ಟಣ: ಪಟ್ಟಣದ ತಾಲೂಕು ಕಚೇರಿ‌ ಆವರಣದಲ್ಲಿ ವಿವಿಧ ಕೆಲಸ ಕಾರ್ಯಗಳಿಗೆ ಬರುವ ಕೆಲ ಗ್ರಾಮಸ್ಥರು ಮೂತ್ರ ವಿಸರ್ಜನೆ ಮಾಡುತ್ತಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ತಾಲೂಕು ಕಚೇರಿಯ ಹೊರ ಆವರಣದಲ್ಲಿ ಆರ್‌ಟಿಸಿ, ಆದಾಯ ಮತ್ತು ಜಾತಿ ಪ್ರಮಾಣಪತ್ರ ಸೇರಿದಂತೆ ಇತರೆ ಅಗತ್ಯ ದಾಖಲಾತಿಗಳನ್ನು ಪಡೆಯುವ ಸ್ಥಳದಲ್ಲಿ‌ ಕೆಲವರು ಮೂತ್ರ ವಿಸರ್ಜಿಸಿ ಅನೈರ್ಮಲ್ಯಕ್ಕೆ ಕಾರಣವಾಗುತ್ತಿದ್ದಾರೆ.
ಮಹಿಳೆಯರು, ಮಕ್ಕಳು ಇದರಿಂದ ತೀವ್ರ ಮುಜುಗರಕ್ಕೆ ಒಳಗಾಗುತ್ತಿದ್ದು, ಮೂಗು ಮುಚ್ಚಿಕೊಂಡು ಓಡಾಡುವುದು ಇರಲಿ, ಕಣ್ಣು ಮುಚ್ಚಿಕೊಂಡು ತೆರಳಬೇಕಾದ ಪರಿಸ್ಥಿತಿ ಎದುರಾಗಿದೆ.
ಈ ಸಂಬಂಧ ತಾಲೂಕು ದಂಡಾಧಿಕಾರಿಗಳಾಗಲಿ ಇಲ್ಲ‌ ಸಂಬಂಧ ಪಟ್ಟ ಅಧಿಕಾರಿಗಳಾಗಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಕಚೇರಿ ಆವರಣದಲ್ಲಾಗುತ್ತಿರುವ ಅನೈರ್ಮಲ್ಯವನ್ನು ತಪ್ಪಿಸುವಂತೆ ಸಾರ್ವಜನಿಕರಿಂದ ಒತ್ತಾಯಗಳು ಕೇಳಿ ಬರುತ್ತಿವೆ.