ದಾಖಲೆ ಇಲ್ಲದ 50 ಲಕ್ಷ ನಗದು ವಶ

ಹಣ
Advertisement

ಬೆಳಗಾವಿ: ಯಾವುದೇ ದಾಖಲೆಗಳು ಇಲ್ಲದೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 50 ಲಕ್ಷ ಹಣವನ್ನು ಎಫ್‌ಎಸ್‌ಟಿ ಹಾಗೂ ಪೊಲೀಸ್‌ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಜಿಲ್ಲೆಯ ಸದಲಗಾ ದತ್ತವಾಡ ಚೆಕ್‌ಪೋಸ್ಟ್‌ನಲ್ಲಿ ಇಂದು ಜರುಗಿದೆ.
ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ಎದುರಾಗಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಚೆಕ್‌ಪೋಸ್ಟ್‌ಗಳ ಮೂಲಕ ಕಟ್ಟೆಚ್ಚರ ವಹಿಸಲಾಗಿದ್ದು, ಅದರಂತೆ ಇಂದು ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ಸದಲಗಾ ದತ್ತವಾಡ ಚೆಕ್‌ಪೋಸ್ಟ್‌ನಲ್ಲಿ ಎಫ್‌ಎಸ್‌ಟಿ ಹಾಗೂ ಪೊಲೀಸ್‌ ಅಧಿಕಾರಿಗಳು ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 50 ಲಕ್ಷ ರೂ. ‌ನಗದು ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಸಂಜೀವ ಪಾಟೀಲ ತಿಳಿಸಿದ್ದಾರೆ.