ಬೆಳಗಾವಿ: ಗ್ರಾಮದ ಜಾತ್ರೆ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಲ್ಲಿ ಮಿಂದು ಒದ್ದೆ ಬಟ್ಟೆಯಲ್ಲಿ ದೀರ್ಘದಂಡ ನಮಸ್ಕಾರ ಸಲ್ಲಿಸುತ್ತಾ ದೇವಾಯಲದತ್ತ ಬರುತ್ತಿದ್ದ ಯುವತಿಯ ಮೇಲೆ ಕಾರು ಹರಿದು ಸಾವನ್ನಪ್ಪಿರುವ ಘಟನೆ ಅಥಣಿ ತಾಲೂಕಿನ ತೀರ್ಥ ಗ್ರಾಮದಲ್ಲಿ ನಡೆದಿದೆ.
ಅಥಣಿ ತಾಲೂಕಿನ ತೀರ್ಥ ಗ್ರಾಮದ ನಿವಾಸಿ ಐಶ್ವರ್ಯ ನಾಯಿಕ(22) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನನ್ನು ಬಂಧಿಸಿದ್ದಾರೆ.