ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಪರೇಡ್‌ನಲ್ಲಿ ರಾಜ್ಯದ ನಾರಿಶಕ್ತಿಯ ಅನಾವರಣವಾಗಲಿದೆ.
ಹೌದು.. ಈ ವಿಷಯವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಾರಿಯ ಸ್ತಬ್ಧಚಿತ್ರದಲ್ಲಿ ನಾಡಿನ ಹಿತಕ್ಕಾಗಿ ಜೀವನವನ್ನೇ ಸಮರ್ಪಿಸಿಕೊಂಡಿರುವ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ, ಸೂಲಗಿತ್ತಿ ನರಸಮ್ಮ, ತುಳಸಿಗೌಡ ಹಾಲಕ್ಕಿ ಅವರ ಚಿತ್ರ ಗಮನ ಸೆಳೆಯಲಿದೆ.