ಹುಬ್ಬಳ್ಳಿ-ದೆಹಲಿ ವಿಮಾನ ಸೇವೆ ಇಂದಿನಿಂದ ಆರಂಭವಾಗಿದ್ದು, ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿಮಾನದಲ್ಲಿ ಹುಬ್ಬಳ್ಳಿ ಭಾಷೆಯಲ್ಲಿ ಅನೌನ್ಸ್‌ಮೆಂಟ್ ಮಾಡಲಾಗುತ್ತಿದ್ದು ಈ ಕುರಿತು ಅವರು ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.
ʻನಮ್ಮ ಹುಬ್ಬಳ್ಳಿಯಿಂದ ದೆಹಲಿಗೆ ವಿಮಾನ ಸೇವಾ ಚಾಲೂ ಆತು ಅನ್ನೋದ ಒಂದ ವಿಶೇಷ ಆದ್ರ, ಫ್ಲೈಟ್ ಅನೌನ್ಸ್‌ಮೆಂಟ್ ಸಹ ನಮ್ಮ ಉತ್ತರ ಕರ್ನಾಟಕ ಭಾಷಾದಾಗ ಆಗಿದ್ದು ಇನ್ನೊಂದ ವಿಶೇಷ. ನಮ್ಮ ಬೈಲಹೊಂಗಲದವ್ರೇ ಆದ ಅಕ್ಷಯ್ ಪಾಟೀಲ್ ಇವತ್ತಿನ ವಿಮಾನದ ಪೈಲೆಟ್ ಆಗಿದ್ರಿಂದ ಸ್ವಚ್ಛ ಉತ್ತರ ಕರ್ನಾಟಕ ಭಾಷಾದಾಗ ಎಲ್ಲಾ ಪ್ರಯಾಣಿಕರಿಗೆ ಸ್ವಾಗತ ಮಾಡಿ, ರಾಷ್ಟ್ರ ರಾಜಧಾನಿಗೆ ಕರಕೊಂಡ ಹೋದ್ರು. ಇದಕ್ಕಿಂತ ಹೆಚ್ಚಿನ ಖುಷಿ ಏನ ಬೇಕ ಹೇಳ್ರಿ…ʼ
ಉಳಿಬೇಕು ನಮ್ಮ ಭಾಷಾ ಮತ್ತ ಸಂಸ್ಕೃತಿ ಅಂದ್ರ ಪಕ್ಕಾ ಆಗೇ ಆಗ್ತೈತಿ ಪ್ರಗತಿ ಎಂದು ಕೇಂದ್ರ ಸಚಿವರು ಬರೆದುಕೊಂಡಿದ್ದಾರೆ.