ದೇವೇಗೌಡರ ಆರೋಗ್ಯ ವಿಚಾರಿಸಿದ ಬಿಎಸ್‌ವೈ

ದೇವೇಗೌಡ
Advertisement

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ನಿವಾಸಕ್ಕೆ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭೇಟಿ ನೀಡಿ ದೇವೇಗೌಡರ ಆರೋಗ್ಯ ವಿಚಾರಿಸಿದರು. ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಲಿ, ದೇಶ ಮತ್ತು ರಾಜ್ಯಕ್ಕೆ ಅವರ ಸೇವೆ ಇನ್ನೂ ಹೆಚ್ಚಿನ ಕಾಲ ಮುಂದುವರಿಯಲಿ. ಅವರ ಮಾರ್ಗದರ್ಶನ ನಮ್ಮೆಲ್ಲರಿಗೂ ಸಿಗುವಂತಾಗಲಿ ಎಂದಿದ್ದಾರೆ. ಬಿಎಸ್‌ವೈ ಅವರೊಂದಿಗೆ ಎಸ್‌.ಆರ್‌. ವಿಶ್ವನಾಥ, ಜೀವರಾಜ್‌ ಇದ್ದರು.