ಮೈಸೂರು: ದೇಶದಲ್ಲಿ 10 ವರ್ಷಗಳಲ್ಲಿ ಶೇ. 75ರಷ್ಟು ಹುಲಿಗಳ ಸಂಖ್ಯೆ ಏರಿಕೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮೈಸೂರಿನ ಕೆಎಸ್ಒಯು ಘಟಿಕೋತ್ಸವ ಭವನದಲ್ಲಿ ಏರ್ಪಡಿಸಲಾದ ಹುಲಿ ಯೋಜನೆಯ ಸುವರ್ಣಮಹೋತ್ಸವ ಕಾರ್ಯಕ್ರಮದಲ್ಲಿ ಹುಲಿ ಗಣತಿ ವರದಿಯನ್ನು ಬಿಡುಗಡೆ ಮಾಡಿದ ಅವರು, 2022ರ ವರದಿ ಪ್ರಕಾರ ರಾಜ್ಯದಲ್ಲಿರುವ ಹುಲಿಗಳ ಸಂಖ್ಯೆ 3,167 ಏರಿಕೆಯಾಗಿದೆ. ಭಾರತದಲ್ಲಿ ಹುಲಿಗಳ ಸಂತತಿ ಹೆಚ್ಚಿರುವುದು ಗೌರವದ ಕ್ಷಣ ಎಂದರು.