ಹುಬ್ಬಳ್ಳಿ: ನಮ್ಮ ದೇಶದ ನೆರೆಯ ಹಲವು ರಾಷ್ಟ್ರಗಳಾದ ಶ್ರೀಲಂಕಾ, ಪಾಕಿಸ್ತಾನ, ಬಾಂಗ್ಲಾದೇಶ ಸೇರಿದಂತೆ ಅನೇಕ ರಾಷ್ಟ್ರಗಳು ಆರ್ಥಿಕ ನಷ್ಟ ಅನುಭವಿಸಿ ಸಂಕಷ್ಟದಲ್ಲಿವೆ. ಭಾರತದ ಆರ್ಥಿಕತೆ ವೇಗವಾಗಿ ಬೆಳೆಯುತ್ತಿದ್ದು, ದೇಶದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಹುಬ್ಬಳ್ಳಿಯ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಹುಬ್ಬಳ್ಳಿ-ಧಾರವಾಡ ಪದಾಧಿಕಾರಿಗಳ ವಿಶೇಷ ಸಭೆಯಲ್ಲಿ ಮಾತನಾಡಿ, ಭಾರತ ದೇಶವು ಜಗತ್ತಿನಲ್ಲಿ ಬ್ರಿಟನ್ ದೇಶವನ್ನು ಹಿಂದಿಕ್ಕಿ ೫ನೇ ಸ್ಥಾನದಲ್ಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ದೇಶದಲ್ಲಿ ಸೆ. 17ರಿಂದ ಅ. 2ರ ವರೆಗೆ ಸೇವಾ ಪಾಕ್ಷಿಕ ಎಂಬ ಅನೇಕ ಸಮಾಜ ಸೇವಾ ಕಾರ್ಯ-ಚಟುವಟಿಕೆಗಳು ನಡೆಯಲಿವೆ ಎಂದರು.