ದೇಶದ ನಂಬರ್ 1 ರಾಜ್ಯವಾಗುವ ಕಾಲ ಸನ್ನಿಹಿತ : ಬಸವರಾಜ ಬೊಮ್ಮಾಯಿ

Bhuvaneshwari
Advertisement

ಬೆಂಗಳೂರಿನ ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿರುವ 67 ನೇ ಕನ್ನಡ ರಾಜ್ಯೋತ್ಸವ ಆಚರಣೆ – 2022 ರ ನಿಮಿತ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕರ್ನಾಟಕ ರಾಜ್ಯ ಬಂಡವಾಳ ಹೂಡಿಕೆದಾರರಿಗೆ ನೆಚ್ಚಿನ ತಾಣವಾಗಿದೆ. ನಾಳೆಯಿಂದ ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯಲಿದ್ದು, ಒಟ್ಟು ₹7 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಅಂದಾಜು 3 ಲಕ್ಷ ಉದ್ಯೋಗ ಸೃಷ್ಟಿಯಾಗುವ ನೀರಿಕ್ಷೆಯಿದೆ. ಕರ್ನಾಟಕ ರಾಜ್ಯ ಪ್ರಗತಿಯಲ್ಲಿ ದೇಶದ ನಂಬರ್ 1 ರಾಜ್ಯವಾಗುವ ಕಾಲ ಸನ್ನಿಹಿತವಾಗಿದೆ ಎಂದರು.