ದ್ವಾರಕಾ ಪೀಠದ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ನಿಧನ

ಸ್ವರೂಪಾನಂದ ಸರಸ್ವತಿ ಸ್ವಾಮೀಜಿ
Advertisement

ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ದೀರ್ಘಕಾಲದ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ಅವರಿಗೆ 99 ವರ್ಷ ವಯಸ್ಸಾಗಿತ್ತು. ತಮ್ಮ 9ನೇ ವಯಸ್ಸಿನಲ್ಲಿ ಮನೆ ತೊರೆದು ಧಾರ್ಮಿಕ ತೀರ್ಥಯಾತ್ರೆ ಆರಂಭಿಸಿದ ಅವರು, ಬಳಿಕ ಕಾಶಿಯನ್ನು ತಲುಪಿ ಅಲ್ಲಿಯೇ ವೇದ, ಧರ್ಮ ಗ್ರಂಥಗಳನ್ನು ಕಲಿತರು. ಅಲ್ಲದೇ, ಆಗ ಬ್ರಿಟಿಷರ ವಿರುದ್ಧ ಕ್ವಿಟ್ ಇಂಡಿಯಾ ಚಳವಳಿ ನಡೆಯುತ್ತಿತ್ತು. ಇದರಿಂದ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿ 19ನೇ ವಯಸ್ಸಿನಲ್ಲಿ ಕ್ರಾಂತಿಕಾರಿ ಸಾಧು ಎಂದೇ ಖ್ಯಾತಿ ಗಳಿಸಿದ್ದರು. ಈ ಸಂದರ್ಭದಲ್ಲಿ ಅವರು ವಾರಣಾಸಿ ಜೈಲಿನಲ್ಲಿ ಒಂಬತ್ತು ತಿಂಗಳು ಮತ್ತು ಮಧ್ಯಪ್ರದೇಶ ಜೈಲಿನಲ್ಲಿ ಆರು ತಿಂಗಳು ಕಳೆದಿದ್ದರು. ಇಂದು ಮಧ್ಯಪ್ರದೇಶದ ನರಸಿಂಗ್‌ಪುರ ಜಿಲ್ಲೆಯ ಪರಮಹಂಸಿ ಗಂಗಾ ಆಶ್ರಮದಲ್ಲಿ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಕೊನೆಯುಸಿರೆಳೆದರು.