ಯೋಗಿ ಆದಿತ್ಯನಾಥ್ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್‌ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದ್ದು, ಇದೀಗ ಅಜಂ ಖಾನ್‌ಗೆ ರಾಂಪುರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಉತ್ತರ ಪ್ರದೇಶದ ಮಿಲ್ಲತ್ ಪ್ರದೇಶದಲ್ಲಿ ಭಾಷಣ ಮಾಡುವಾಗ ಅಜಂ ಖಾನ್ ಪ್ರಧಾನಿ ಮೋದಿ ಮತ್ತು ಯೋಗಿ ಅವರನ್ನು ಗುರಿಯಾಗಿಸಿಕೊಂಡು ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಸಂಬಂಧ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇಂದು ರಾಂಪುರ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, 3 ವರ್ಷಗಳ ಕಾಲ ಜೈಲು ಶಿಕ್ಷೆ ನೀಡಿತ್ತು. ಆದರೆ ಇದೀಗ ನ್ಯಾಯಲಯ ಜಾಮೀನು ನೀಡಿದೆ.