ನಕಲಿ ಮಾರ್ಕ್ಸ್‌ ಕಾರ್ಡ್‌ ಜಾಲ – ಐವರ ಬಂಧನ

ಐವರ ಬಂಧನ
Advertisement

ಬೆಂಗಳೂರು: ನಕಲಿ ಮಾರ್ಕ್ಸ್‌ ಕಾರ್ಡ್‌ ಚಾಲವನ್ನು ಪತ್ತೆ ಹಚ್ಚುವಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ದೇಶದ 29 ವಿಶ್ವವಿದ್ಯಾಲಯಗಳ ಅಂಕಪಟ್ಟಿ ನಕಲಿ ಮಾಡಿ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ . ಬಂಧಿತರಿಂದ 1500 ಕ್ಕೂ ಹೆಚ್ಚು ನಕಲಿ ಮಾರ್ಕ್ಸ್ ಕಾರ್ಡ್ , 80 ನಕಲಿ ಸೀಲ್ , 30 ಹಾಲೋಗ್ರಾಂ ಸ್ಟಿಕ್ಕರ್, 8 ಮೊಬೈಲ್​ನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್​ನಲ್ಲಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದು, ಪಿ‌ಯು ಬೋರ್ಡ್‌, ಯುಪಿಯ ಸಿ.ವಿ. ರಾಮನ್ ವಿವಿ, ದೆಹಲಿಯ ಸೆಕೆಂಡರಿ ಬೋರ್ಡ್, ಮೇಘಾಲಯದ ವಿಲಿಯಂ ಕ್ಯಾರಿ ಯೂನಿವರ್ಸಿಟಿ ಸೇರಿದಂತೆ 25ಕ್ಕೂ ಹೆಚ್ಚು ವಿವಿಗಳ ಅಂಕಪಟ್ಟಿ ನಕಲು ಮಾಡಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಸಿಸಿಬಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.