ಇತ್ತಿಚೆಗೆ ಹಾವೇರಿ ಜಿಲ್ಲೆಯ ಹಿರೇಕೇರೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದ್ದ ಬಿಜೆಪಿ ಮಹಿಳಾ ಮೋರ್ಚಾ ಸಮಾವೇಶದಲ್ಲಿ ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಕುಟುಂಬ ರಾಜಕಾರಣದ ವಿರುದ್ಧ ನಾಲಿಗೆ ಹರಿಬಿಟ್ಟ ಆರೋಪದ ಹಿನ್ನೆಲೆಯಲ್ಲಿ ಚಿತ್ರನಟಿ ಶೃತಿ ವಿರುದ್ಧ ಪೊಲೀಸ್ ಕೇಸ್ ದಾಖಲಿಸಲಾಗಿದೆ. ಹಿರೇಕೆರೂರು ನೋಡಲ್ ಅಧಿಕಾರಿ ಪಂಪಾಪತಿ ಎಂಬವರು ನಟಿ ಶೃತಿ ವಿರುದ್ಧ ದೂರು ದಾಖಲಿಸಿದ್ದರು. ದೂರಿನ ಅನ್ವಯ ಪ್ರಕರಣ ದಾಖಲಾಗಿದೆ. ನಿಮ್ಮ ವಂಶ ಬಿಟ್ಟು ಬೇರೆಯವರ ವಂಶ ಅಭಿವೃದ್ದಿ ಆಗಬೇಕಾದ್ರೆ ಜೆಡಿಎಸ್ಗೆ ಮತ ಹಾಕಿ. ನಿಮ್ಮ ವಂಶ ಬಿಟ್ಟು ಹೊರದೇಶದ ವಂಶ ಅಭಿವೃದ್ಧಿ ಆಗಬೇಕಾದ್ರೆ ಕಾಂಗ್ರೆಸ್ಗೆ ಮತ ಹಾಕಿ. ನಿಮ್ಮ ವಂಶದ ಜೊತೆಗೆ ದೇಶದ ಅಭಿವೃದ್ಧಿ ಆಗಬೇಕಾದ್ರೆ ಬಿಜೆಪಿಗೆ ಮತ ಹಾಕಿ ಎಂದು ಹೇಳಿದ್ದರು. ಶೃತಿ ಅವರ ಮಾತಿನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು.