ಹುಬ್ಬಳ್ಳಿ: ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದು, ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನ ಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಕಾಂಗ್ರೆಸ್ ಮುಖಂಡ ಅಲ್ತಾಫ್ ನವಾಜ್ ಕಿತ್ತೂರ ಹೇಳಿದರು.
ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಹಿಂದೆ ನಡೆದ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದೇನೆ. ಪಕ್ಷದ ಹಿರಿಯರು ನನಗೆ ಟಿಕೆಟ್ ನೀಡುವ ಭರವಸೆ ಇದೆ ಎಂದರು.
ಹಿಂದೆ ಜೆಡಿಎಸ್ ಪಕ್ಷದಲ್ಲಿ ಉತ್ತಮ ಕೆಲಸ ಮಾಡಿದ್ದಕ್ಕಾಗಿ ಟಿಕೆಟ್ ದೊರಕಿತ್ತು. ಕಾಂಗ್ರೆಸ್‌ನಲ್ಲಿ ಉತ್ತಮ ಸ್ಥಾನಮಾನ ನೀಡುತ್ತೇವೆ ಎಂದು ಮಾಜಿ ಸಚಿವ ವಿನಯ ಕುಲಕರ್ಣಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದರು. ಇಷ್ಟು ವರ್ಷ ಕಳೆದರೂ ಪಕ್ಷದ ಯಾವುದೇ ಜವಾಬ್ದಾರಿ ಕೇಳಿಲ್ಲ. ಈ ಬಾರಿಯಾದರೂ ಟಿಕೆಟ್ ನೀಡಬೇಕು. ಒಂದು ವೇಳೆ ಟಿಕೇಟ್ ನೀಡಿದರೆ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ಸಂಪೂರ್ಣ ಬೆಂಬಲ ನೀಡುತ್ತಾರೆ ಎಂದರು.