ಮೈಸೂರು : ವಿಧಾನ ಪರಿಷತ್ ಮಾಜಿ ಸದಸ್ಯ ಸಂದೇಶ ನಾಗರಾಜ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜನವರಿಯಲ್ಲಿ ಬಿಜೆಪಿಗೆ ರಾಜೀನಾಮೆ ಕೊಡುತ್ತೇನೆ,
ನಾನು ಬಿಜೆಪಿಯಲ್ಲಿ ಸದ್ಯ ಸಕ್ರಿಯನಾಗಿಲ್ಲ. ಅಕ್ರಮವಾಗಿದ್ದೇನೆ. ಪರಿಷತ್ ಸ್ಥಾನ ಕೊಡುತ್ತೇನೆ ಎಂದು ನನ್ನನ್ನು ಬಿಜೆಪಿಗೆ ಕರೆದುಕೊಂಡು ಬಂದರು. ಬಿಜೆಪಿಯವರು ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಅನ್ಯಾಯ ಮಾಡಿದರು. ಅನ್ಯಾಯ ಮಾಡೋದರಲ್ಲಿ ಬಿಜೆಪಿಯವರು ನಿಸ್ಸೀಮರು ಎಂದು ಆರೋಪಿಸಿದರು. ಬಿಜೆಪಿಯವರು ಎಚ್. ವಿಶ್ವನಾಥ್, ಯಡಿಯೂರಪ್ಪ ಹಾಗೂ ನನ್ನನ್ನು ರಾಜಕೀಯ ಬಲಿ ಕೊಟ್ಟಿದ್ದಾರೆ. ಬಿಜೆಪಿಯವರು ಯಡಿಯೂರಪ್ಪರನ್ನು ಒಳ್ಳೆತನದಲ್ಲಿ ಮುಗಿಸಿದರು. ಆ ವೇಳೆಯೇ ಬಿಜೆಪಿಗೆ 40 ಸ್ಥಾನ ನಷ್ಟವಾಯ್ತು. ವರುಣಾ ಕ್ಷೇತ್ರದಲ್ಲಿ ರಾಜಕೀಯವಾಗಿ ವಿಜಯೇಂದ್ರ ಬಲಿ ಕೊಡಲು ಯೋಜನೆ ಮಾಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಕಣಕ್ಕಿಳಿಸಿ ವಿಜಯೇಂದ್ರ ಅವರನ್ನು ಸೋಲಿಸಲು ತಂತ್ರ ರೂಪಿಸಲಾಗಿದೆ ಎಂದು ಅವರು ಹೇಳಿದರು.
ಈ ಬಾರಿ ರಾಜ್ಯದಲ್ಲಿ ಬಿಜೆಪಿ ಗೆಲ್ಲುವುದಿಲ್ಲ. ಬಿಜೆಪಿಯಿಂದ 10ಕ್ಕಿಂತ ಹೆಚ್ಚು ಶಾಸಕರು ಕಾಂಗ್ರೆಸ್ಗೆ ಬರುತ್ತಾರೆ.
ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದರು.