ಧಾರವಾಡ: ರಾಷ್ಟ್ರೀಯ ಯುವಜನೋತ್ಸವ ಉದ್ಘಾಟನೆ ಕಾರ್ಯಕ್ರಮ ಹುಬ್ಬಳ್ಳಿ ನಗರದ ರೈಲ್ವೆ ಮೈದಾನದಲ್ಲಿ ಜರುಗುವದರಿಂದ ಪ್ರಧಾನಮಂತ್ರಿಗಳು ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸುತ್ತಿರುವುದರಿಂದ ಜನದಟ್ಟಣೆ ಹೆಚ್ಚಾಗುತ್ತದೆ.
ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮವಾಗಿ ಹುಬ್ಬಳ್ಳಿ ನಗರದ 1ರಿಂದ 10ನೇ ತರಗತಿ ವರೆಗಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ದಿನಾಂಕ 12ರಂದು ಗುರುವಾರ ಒಂದು ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಯಾವುದೇ ರಜೆ ನೀಡಿರುವುದಿಲ್ಲ, ಎಂದಿನಂತೆ ಪಿಯುಸಿ ಮತ್ತು ಡಿಗ್ರಿ ಕಾಲೇಜುಗಳ ತರಗತಿಗಳು ನಡೆಯುತ್ತವೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.