ಬೆಂಗಳೂರು: ನಿಗದಿತ ಸಮಯದಲ್ಲಿ ಮಹಾಲಕ್ಷ್ಮಿ ಏತನೀರಾವರಿ ಯೋಜನೆ ಪೂರ್ಣ ಗೊಳಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ಚಿಕ್ಕೋಡಿ ರೈತರಿಗೆ ಭರವಸೆ ನೀಡಿದರು.
ಮಾಜಿ ಸಂಸದ ಪ್ರಭಾಕರ ಕೋರೆ ಅವರ ನೇತೃತ್ವದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ರೈತ ಮುಖಂಡರು ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಶ್ರೀ ಮಹಾಲಕ್ಷ್ಮಿ ಏತ ನೀರಾವರಿ ಯೋಜನೆ ಮಂಜೂರು ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ಚಿಕ್ಕೋಡಿಯ ಮಹಾಲಕ್ಷ್ಮಿ ಏತನೀರಾವರಿ ಯೋಜನೆಗೆ ಸುಮಾರು 10-12 ವರ್ಷಗಳಿಂದ ಬೇಡಿಕೆ ಇತ್ತು. ಕಬ್ಬು ಬೆಳೆದು, ಸಕ್ಕರೆ ಕಾರ್ಖಾನೆಗಳಿರುವ ಚಿಕ್ಕೋಡಿಯ ಕೆಲವು ಗ್ರಾಮಗಳಿಗೆ ಏತ ನೀರಾವರಿ ಅಗತ್ಯವಿತ್ತು. ಈ ಭಾಗದ ರೈತರಿಗೆ ಅನುಕೂಲವಾಗಬೇಕೆಂಬ ದೃಷ್ಟಿಯಿಂದ ಈ ಯೋಜನೆಯನ್ನು ಮಂಜೂರು ಮಾಡಲಾಗಿದೆ ಎಂದರು.
ಶಾಸಕ ಅರವಿಂದ ಬೆಲ್ಲದ್ , ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.