ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 63 ವರ್ಷದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸೋಮವಾರ ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಆಸ್ಪತ್ರೆಗೆ ಕರೆದೊಯ್ದಿದ್ದು, ಖಾಸಗಿ ವಾರ್ಡ್‌ನಲ್ಲಿ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅವರ ಆರೋಗ್ಯ ಸ್ಥಿತಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.