ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ನಾನು ಬಯಸಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ಪ್ರಕಾಶ್ ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ ಎಂದು ತಿಳಿಸಿದ್ದಾರೆ.
ಅಲ್ಲದೇ ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.