ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಸರ್ಕಾರ ಘೋಷಿಸಿದ್ದು, ನವೆಂಬರ್ 1ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ದಿ. ಪುನೀತ್ ರಾಜ್ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಈ ವರೆಗೆ 8 ಜನರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದ್ದು, 2009ರ ನಂತರ ಮೊದಲ ಬಾರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಕುರಿತು ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಹಾಗೂ ಪುನೀತ್ ರಾಜ್ಕುಮಾರ್ ಕುಟುಂಬದವರೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು ಎಂದು ತಿಳಿಸಿದರು.