ಪಂಚಮಸಾಲಿಗಷ್ಟೇ ಅಲ್ಲ, ಎಲ್ಲ ವರ್ಗಕ್ಕೂ ಆದ್ಯತೆ: ಮುನೇನಕೊಪ್ಪ

Advertisement

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೀಸಲಾತಿ ವಿಷಯದಲ್ಲಿ ಮಹತ್ವದ ನಿರ್ಧಾರ ಮಾಡಿದ್ದಾರೆ. ಕೇವಲ ಪಂಚಮಸಾಲಿ ಸಮಾಜವಷ್ಟೇ ಅಲ್ಲ. ಈ ರಾಜ್ಯದಲ್ಲಿರುವ ಎಲ್ಲ ವರ್ಗದ ಜನರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಆದ್ಯತೆ ಕೊಡುವ ಕೆಲಸ ಮಾಡಿದ್ದಾರೆ ಎಂದು ಸಕ್ಕರೆ ಮತ್ತು ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.
ನವಲಗುಂದದಲ್ಲಿ ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಹುತಾತ್ಮ ರೈತರ ಪುತ್ಥಳಿಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಬಹುದೊಡ್ಡ ನಿರ್ಣಯವನ್ನು ಮಾಡಿದ್ದಾರೆ. ಅವರ ನಿರ್ಧಾರದಲ್ಲಿ ಎಲ್ಲ ಸಮುದಾಯದ ಹಿತ ಅಡಗಿದೆ. ಅವರ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ಸಹಕಾರ ಕೊಟ್ಟಿದೆ ಎಂದರು.
ಎಲ್ಲ ವರ್ಗದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಪಕ್ಷ ಬಿಜೆಪಿ. ಸಬ್ ಕಾ ಸಾಥ್ ಸಬ್ ಕಾ ವಿಕಾಸ ಎಂಬುದು ನಮ್ಮ ಪಕ್ಷದ ಧ್ಯೇಯ. ಅಂತಹ ತೀರ್ಮಾನವನ್ನು ಮುಖ್ಯಮಂತ್ರಿ ಕೈಗೊಂಡಿದ್ದಾರೆ ಎಂದರು.