ಪಾಕ್‌ನ ಡ್ರೋನ್ ಹೊಡೆದುರುಳಿಸಿದ ಭದ್ರತಾ ಪಡೆ

Advertisement

ಭಾರತದ ಗಡಿ ಭಾಗದ ದಾಟಿ ಜಿಲ್ಲೆಯ ಸುಂದರ್ಬನಿ ಸೆಕ್ಟರ್‌ನ ಬೆರಿ ಪಟ್ಟಾನ್ ಪ್ರದೇಶದಲ್ಲಿ ಭಾರತದ ಭೂಪ್ರದೇಶಕ್ಕೆ ಡ್ರೋನ್ ಪ್ರವೇಶಿಸಿತ್ತು ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಕಳೆದ ರಾತ್ರಿ ಪಾಕಿಸ್ತಾನದಿಂದ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಜಿಲ್ಲೆಯ ಸುಂದರ್ಬನಿ ಸೆಕ್ಟರ್‌ನ ಬೆರಿ ಪಟ್ಟಾನ್ ಪ್ರದೇಶದಲ್ಲಿ ಭಾರತದ ಭೂಪ್ರದೇಶಕ್ಕೆ ಡ್ರೋನ್ ಪ್ರವೇಶಿಸಿತ್ತು, ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಪಂಜಾಬ್​ನಲ್ಲಿ ಇತ್ತೀಚೆಗೆ ಪಾಕಿಸ್ತಾನದಿಂದ ಮಾದಕ ವಸ್ತುಗಳ ಹೊತ್ತು ತಂದ ಅನೇಕ ಡ್ರೋನ್​ಗಳು ಪತ್ತೆಯಾಗಿವೆ. ಇದರ ನಡುವೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ದಾಟಿ ಬಂದ ಪಾಕಿಸ್ತಾನದ ಡ್ರೋನ್ ಪತ್ತೆಯಾಗಿದ್ದು, ಅದನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿವೆ. ಎಕೆ 47 ರೈಫಲ್‌ನ ಐದು ಮ್ಯಾಗಜೀನ್‌ಗಳು, 131 ರೌಂಡ್ಸ್​, 2 ಲಕ್ಷ ರೂಪಾಯಿ ನಗದು ಮತ್ತು ಇತರ ವಸ್ತುಗಳನ್ನು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.