ಪಿಎಫ್‌ಐ ಮುಖಂಡರ ವಿಚಾರಣೆ: ಡೈರಿ ಪತ್ತೆ

ಪಿಎಫ್‌ಐ
Advertisement

ಮಂಡ್ಯ: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಪಿಎಫ್‌ಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡುತ್ತಿದ್ದಾರೆ. ಇಂದು ಕೂಡ 40ಕ್ಕೂ ಹೆಚ್ಚು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ಜಿಲ್ಲೆಯಲ್ಲಿ ಪಿಎಫ್‌ಐ ಕಾರ್ಯಕರ್ತರು ನಗರದ ಪೂರ್ವ ಪೊಲೀಸ್‌ ಠಾಣೆ ಎದುರು ಹೈಡ್ರಾಮಾ ಮಾಡಿದ್ದಾರೆ.
ಹೌದು, ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸ್‌ ಅಧಿಕಾರಿಗಳು ದಾಳಿ ನಡೆಸಿ, ಪಿಎಫ್‌ಐ ಜಿಲ್ಲಾಧ್ಯಕ್ಷ ಇರ್ಫಾನ್‌ ರನ್ನ ಬಂಧಿಸಲಾಗಿತ್ತು. ಇದನ್ನು ಖಂಡಿಸಿ ಕಾರ್ಯಕರ್ತರು ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕಾರ್ಯಕರ್ತರು ನೋಟಿಸ್‌ ಕೊಡದೆ ಏಕಾಏಕಿ ಬಂಧಿಸಿದ್ದಾರೆ. ನಮ್ಮ ಸಂಘಟನೆಯನ್ನೇ ಅವರು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಈ ವೇಳೆ ಕಾರ್ಯಕರ್ತರು ಪೊಲೀಸರ ವಿರುದ್ಧವೇ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಾದ್ಯಂತ ಪಿಎಫ್‌ಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿ, 40ಕ್ಕೂ ಹೆಚ್ಚು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಈ ಬೆನ್ನಲ್ಲೇ ಮುಖಂಡರ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಮುಖಂಡರ ವಿಚಾರಣೆ ವೇಳೆ ಸ್ಫೋಟಕ ಡೈರಿವೊಂದು ಪತ್ತೆಯಾಗಿದ್ದು. ಆ ಡೈರಿಯಲ್ಲಿ ́TRAINING TO BE ORGANZED́ ಎಂದು ಬರಹ ಪತ್ತೆಯಾಗಿದೆ. ಆದರೆ ಅದರಲ್ಲಿ ದಿನಾಂಕ ಹಾಗೂ ತಾರೀಕುಗಳು ಪತ್ತೆಯಾಗಿಲ್ಲ ಎಂಬ ಮಾಹಿತಿ ಬಹಿರಂಗವಾಗಿದ್ದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.