ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯು ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ದಿನ ಸುಸೂತ್ರವಾಗಿ ನಡೆದವು. ಕನ್ನಡ ಮತ್ತು ಅರೇಬಿಕ್ ವಿಷಯದ ಪರೀಕ್ಷೆ ನಡೆದಿದ್ದು, ಈ ವಿಷಯಗಳಿಗೆ 5,33,797 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 23,771 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. ಇನ್ನೂ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನಿಸಿದ ಇಬ್ಬರು ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ.